ಪುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವು ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ದಿನಾಂಕ 5-9-2024 ರಂದು ನಡೆಯಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ವಾಲ್ಟರ್ ಹೆಚ್ ಡಿಮೆಲ್ಲೋ, ನಿವೃತ್ತ ವಿಭಾಗೀಯ ಸಹ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ವಿಭಾಗ, ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಬಿ ಐತಪ್ಪ ನಾಯ್ಕ್ ಇವರು ವಹಿಸಿದರು. ಸನ್ಮಾನಿಸಲ್ಪಟ್ಟ ನಿವೃತ್ತ ಶಿಕ್ಷಕರನ್ನು ಡಾ ಮಾಧವ ಭಟ್ ಹೆಚ್ ನಿವೃತ್ತ ಪ್ರಾಚಾರ್ಯರು, ಮತ್ತು ಪ್ರೊ. ಎ ವಿ ನಾರಾಯಣ ನಿವೃತ್ತ ಪ್ರಾಚಾರ್ಯರು ಅಭಿನಂದಿಸಿದರು.

ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಶ್ರೀ ಪುತ್ತೂರು ಉಮೇಶ್ ನಾಯಕ್ ಮತ್ತು ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಡಾ ರವಿಪ್ರಕಾಶ್ ಕಜೆ ಉಪಸ್ಥಿತರಿದ್ದರು. ಪ್ರೊ ಝೇವಿಯರ್ ಡಿಸೋಜ ನಿವೃತ್ತ ಪ್ರಾಚಾರ್ಯರು ಕಾರ್ಯಕ್ರಮವನ್ನು ನಿರೂಪಿಸಿದರು.

Leave a comment