ಕ.ಸಾ.ಪ ಪುತ್ತೂರು ಬಡಗನ್ನೂರು ಗ್ರಾಮ ಸಾಹಿತ್ಯ ಸಂಭ್ರಮ’  ಸರಣಿ ಕಾರ್ಯಕ್ರಮ -17

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಬಡಗನ್ನೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ, ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ  ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಡಗನ್ನೂರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ  ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-೧೭ ಈ ಕಾರ್ಯಕ್ರಮವು …

Read more

ಲೇಖಕಿ ಅಕ್ಷತಾ ಶೇಖರ್ ಉಪ್ಪಿನಂಗಡಿ ಅವರ ಪರಿಚಯ

ಲೇಖಕಿ, ಕವಿ, ಸಾಹಿತಿ, ಶಿಕ್ಷಕಿ ಶ್ರೀಮತಿ ಅಕ್ಷತಾ ಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯವರು. ಡಿ.ಇಡಿ, ಬಿ.ಇಡಿ ಹಾಗೂ ಕನ್ನಡ ಮತ್ತು ತುಳು ವಿಷಯದಲ್ಲಿ ಎಂ. ಎ ಪದವಿಯನ್ನು ಪಡೆದಿರುವ ಅಕ್ಷತಾ ಶೇಖರ್ ರವರು ಶ್ರೀರಾಮ ಶಾಲೆ ನಟ್ಟಿಬೖಲು ಹಾಗೂ ಶ್ರೀರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಕವಿ ಅಕ್ಷತಾ ಶೇಖರ್ ಅವರಿಗೆ ಚಿತ್ರಕಲೆ ಮತ್ತು ಸಂಗೀತದಲ್ಲಿ ಬಹಳ ಆಸಕ್ತಿ. ವಿಶೇಷವಾಗಿ ಅಕ್ಷತಾ ರವರು ಮಕ್ಕಳಿಗೆ ಮತ್ತು ಶಾಲೆಗೆ ಸಂಬಂಧಪಟ್ಟ …

Read more

ದ ಕ ಜಿಲ್ಲಾ ಕ.ಸಾ.ಪ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆ -4

ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕದ ವತಿಯಿಂದ ನಡೆಸುವಂತಹ ‘ಶಾಸನ-ಶೋಧನ-ಅಧ್ಯಯನ-ಸಂರಕ್ಷಣಾ’ ಯೋಜನೆಯಡಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಎಂಬಲ್ಲಿ ಇರುವ ಪುರಾತನ ಪಾರ್ವತಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲಭ್ಯವಾದ ಸುಮಾರು 302 ವರ್ಷ ಪುರಾತನ 17ನೇ ಶತಮಾನದ ಕನ್ನಡ …

Read more

ಪುತ್ತೂರಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು

ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸುಮಾರು 50 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮವು ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ದಿನಾಂಕ 5-9-2024 ರಂದು ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ವಾಲ್ಟರ್ ಹೆಚ್ ಡಿಮೆಲ್ಲೋ, ನಿವೃತ್ತ ವಿಭಾಗೀಯ ಸಹ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ …

Read more

ಶಿಕ್ಷಕರ ದಿನಾಚರಣೆ, ಸೇವಾ ನಿವೃತ್ತರ ಸಮಾಗಮ – ಅಭಿನಂದನಾ ಕಾರ್ಯಕ್ರಮ

ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮಕ್ಕೆ ಸರ್ವರಿಗೂ ಸ್ವಾಗತ. ಈ ಕಾರ್ಯಕ್ರಮ ದಲ್ಲಿ ಸುಮಾರು 75 ನಿವೃತ್ತ ಶಿಕ್ಷಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.

ಕ ಸಾ ಪ ಪುತ್ತೂರು -ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮದಲ್ಲಿ ಮುಗಿಲು ಮುಟ್ಟಿದ ಕನ್ನಡ ಜಯ ಘೋಷ  

‘’ಯುವಜನತೆಯನ್ನು ಸಾಹಿತ್ಯ ಕ್ಷೇತ್ರಕ್ಕೆ ಬರಮಾಡಿಕೊಳ್ಳುವ ಹಾಗೂ ಗ್ರಾಮದ ಸಾಧಕರನ್ನು ಗುರುತಿಸಲು ಉತ್ತಮ ವೇದಿಕೆ’’ –  ಶ್ರೀ ಲಕ್ಷ್ಮೀಶ ತೋಳ್ಪಾಡಿ   ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ, ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನದಂಗವಾಗಿ ಸ. ಉ. ಹಿ. ಪ್ರಾ. ಶಾಲೆ ನರಿಮೊಗರು ಇಲ್ಲಿನ ಶತ ಸಂಭ್ರಮ …

Read more

‘ನನ್ನೂರಿನಲ್ಲಿ ನಾ ಕಂಡ ವಿಶೇಷತೆ’ – ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ವಿನೂತನ ಕಾರ್ಯಕ್ರಮ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರದತ್ತ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ‘ನನ್ನೂರಿನಲ್ಲಿ ನಾ ಕಂಡ ವಿಶೇಷತೆ’ ವಿದ್ಯಾರ್ಥಿಗಳಿಗೆ ಬರವಣಿಗೆ ಪ್ರೋತ್ಸಾಹ ನೀಡುವ ಜೊತೆಗೆ ಊರಿನ ವಿಶೇಷತೆಗಳ ಅನಾವರಣ.. ಯೋಜನೆಯನ್ನು ಹಮ್ಮಿಕೊಂಡ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಕರುಣಾಕರ ಸುವರ್ಣ ಹಾಗೂ ಕಾರ್ಯದರ್ಶಿಗಳಾದ ಉದಯ್ ಕುಮಾರ್ ಹಾಗೂ ಸರ್ವ ಪದಾಧಿಕಾರಿಗಳಿಗೆ ಅಭಿನಂದನೆಗಳು.

ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ -16

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ,ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-16 ಈ ಕಾರ್ಯಕ್ರಮವುಶತ ಸಂಭ್ರಮ …

Read more

ಡಾ. ಶ್ರೀಧರ ಎಚ್. ಜಿ ಪರಿಚಯ

ಡಾ. ಶ್ರೀಧರ ಎಚ್. ಜಿ. ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಬರುವ ಮುಂಡಿಗೆಹಳ್ಳ ಎಂಬ ಊರಿನವರು. ಲಾಲ್ ಬಹದ್ದೂರ್ ಶಾಸ್ತಿç ಕಾಲೇಜಿನಿಂದ ಬಿ.ಎ. ಪದವಿ. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಎಂ.ಎ. ಪದವಿಯನ್ನು ಪ್ರಥಮ ರ‍್ಯಾಂಕ್ ಮತ್ತು ಚಿನ್ನದ ಪದಕದೊಂದಿಗೆ ೧೯೮೬ರಲ್ಲಿ ಪಡೆದುಕೊಂಡರು. ಅದೇ ವರ್ಷ (೧೯೮೬) ಯುಜಿಸಿ ನಡೆಸುವ ಜೂನಿಯರ್ ರಿಸರ್ಚ್ ಫೆಲೋಷಿಪ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಡಾ. ಟಿ.ವಿ. ವೆಂಕಟಾಚಲ ಶಾಸ್ತಿçà ಇವರ ಮಾರ್ಗದರ್ಶನದಲ್ಲಿ “ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಯುದ್ಧಕಲೆ” (ಕ್ರಿ.ಶ. ೪೫೦ರಿಂದ ೧೩೫೦) ಎಂಬ …

Read more

ಖ್ಯಾತ ಸಾಹಿತಿ ಶ್ರೀಮತಿ ವೀರಮ್ಮ ಸೋಗಿ ಸಾಹಿತ್ಯ ಪರಿಷತ್ ಭೇಟಿ – ಗೌರವಾರ್ಪಣೆ

ಖ್ಯಾತ ಸಾಹಿತಿ ಶ್ರೀಮತಿ ವೀರಮ್ಮ ಸೋಗಿ ಸಾಹಿತ್ಯ ಪರಿಷತ್ ಭೇಟಿ – ಗೌರವಾರ್ಪಣೆ ‘ಸೋಗಿ ಕುವರಿ’ ಎಂಬ ಕಾವ್ಯನಾಮದಿಂದ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿರುವ ಶ್ರೀಮತಿ ವೀರಮ್ಮ ಸೋಗಿಯವರು ವೃತ್ತಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿ, ಪ್ರವೃತ್ತಿಯಿಂದ ಕವಯಿತ್ರಿ ಪಯಣ ಎಂಬ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರ ಪ್ರವೇಶಿಸಿದ ಇವರು ಹಲವೆಡೆ ಕವಿ ಗೋಷ್ಠಿಗಳಲ್ಲಿ ಭಾಗವಹಿಸಿರುತ್ತಾರೆ. ಸಾಹಿತ್ಯದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನ ಪಡೆದುಕೊಂಡಿದ್ದಾರೆ. 2024ನೇ ಸಾಲಿನ ಚಂದನ ಸಾಹಿತ್ಯ ವೇದಿಕೆ ಸುಳ್ಯದ ಕಡೆಯಿಂದ ಚಂದನ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. …

Read more