ನಡೆದಾಡುವ ವಿಶ್ವಕೋಶ ಶಿವರಾಮ ಕಾರಂತ ಜೀವನ ಚರಿತ್ರೆ
ಕೋಟಾ ಶಿವರಾಮ ಕಾರಂತರು ಯಾರಿಗೆ ಗೊತ್ತಿಲ್ಲ ಹೇಳಿ. ಮಕ್ಕಳಿಂದ ಹಿಡಿದು ಹಿರಿಯರ ತನಕವೂ ಕಾರಂತರ ಹೆಸರು ಹಸಿರು. “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕಾರಂತರು ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕಾದಂಬರಿಕಾರ, ಕವಿ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರರೂ ಆಗಿದ್ದರು. ಕಾರಂತರು ಎಲ್ಲಾ ಪ್ರಕಾರಗಳ ಸಾಹಿತ್ಯದಲ್ಲಿ ಪರಿಣಿತಿ ಹೊಂದಿದವರು. ಆಡುಮುಟ್ಟದ ಸೊಪ್ಪಿಲ್ಲ. ಎಂಬ ಗಾದೆಯಂತೆ, ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲ ಎಂದು ಹೇಳಲಾಗುತ್ತದೆ. ಕಾರಂತರು ಯಾವುದೇ ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ …