ಪುಡ ಅಧ್ಯಕ್ಷರಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದನೆ
ಪುತ್ತೂರು,ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳೂ ಆಗಿರುವ ಖ್ಯಾತ ನ್ಯಾಯವಾದಿಗಳಾದ ಶ್ರೀ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಳ್ಳಲಾದ ಶಾಸನ ಅಧ್ಯಯನ ಸಂರಕ್ಷಣಾ ಯೋಜನೆ ಹಾಗೂ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಹಾಗೂ ಇತರ ಸಾಹಿತ್ಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.ಈ ಸಂದರ್ಭದಲ್ಲಿ ಅವರಿಗೆ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು …