ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಕನ್ನಡದಲ್ಲಿ ಮುದ್ರಿಸುವಂತೆ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಮನವಿ

ರೋಟರಿ ಸಂಸ್ಥೆಗಳ ಆಮಂತ್ರಣ ಪತ್ರಿಕೆಗಳನ್ನು ಇನ್ನು ಕನ್ನಡದಲ್ಲಿ ಮುದ್ರಿಸುವಂತೆ ಮೈಸೂರಿನಲ್ಲಿ ಇಂದು ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಸಂಸ್ಥೆಗಳ ಜಿಲ್ಲಾ ಗವರ್ನರ್ ಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ರಿಂದ ಮನವಿ ಸಲ್ಲಿಸಲಾಯಿತು. ರೋಟರಿ ಸಂಸ್ಥೆಗಳ ಆಮಂತ್ರಣವನ್ನು ಇಂಗ್ಲಿಷ್ ಭಾಷೆಯ ಜೊತೆಯಲ್ಲಿ ಕನ್ನಡ ಭಾಷೆಯಲ್ಲಿಯೂ ಮುದ್ರಿಸುವಂತೆ ದಿನಾಂಕ 21.01.2024 ರಂದು ಮೈಸೂರಿನಲ್ಲಿ ನಡೆದ ರೋಟರಿ ಜಿಲ್ಲಾ ಸಮ್ಮೇಳನದಲ್ಲಿ ರೋಟರಿ ಜಿಲ್ಲಾ ಗವರ್ನರ್ ಎಚ್.ಆರ್ ಕೇಶವ್ ಅವರಿಗೆ ಕ. ಸಾ.ಪ ಪುತ್ತೂರು ಅಧ್ಯಕ್ಷ …

Read more

ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ

ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ದಿನಾಂಕ 13-01-2024 ರಂದು ನಡೆಯಿತು. ಅಮೃತ ಸೋಮೇಶ್ವರ ಅವರು ಬಹುಭಾಷಾ ಪಂಡಿತರು, ಅವರು ಕನ್ನಡ, ಮಲಯಾಳಂ, ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ, ಯಕ್ಷಗಾನ, ನಾಟಕ ರಂಗಗಳಲ್ಲಿ ಇವರ ಕೊಡುಗೆ ಅಪಾರವಾದದ್ದು. ಎಳ್ಳಷ್ಟು ಕೋಪವಿಲ್ಲದ, ಸಾಧು ಸ್ವಭಾವವನ್ನು ಅಳವಡಿಸಿಕೊಂಡ ಮಹಾನ್ …

Read more

ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾಗಿ ಯುವ ಸಾಹಿತಿ ನಾರಾಯಣ ಕುಂಬ್ರ

ಯುವ ಜನತೆಯಲ್ಲಿ ಸಾಹಿತ್ಯಾಸಕ್ತಿ ಮೂಡಿಸುವ ಹಾಗೂ  ಯುವ ಜನತೆಯನ್ನು ಸಾಹಿತ್ಯ ಕ್ಷೇತ್ರದತ್ತ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ಸಾಹಿತ್ಯ ಪೋಷಕರಾದ  ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಮಿತ್ರಂಪಾಡಿ ಜಯರಾಮ ರೈ ಅವರ ಮಹಾ ಪೋಷಕತ್ವದಲ್ಲಿ ಪುತ್ತೂರು ತಾಲೂಕು ಕನ್ನಡ  ಸಾಹಿತ್ಯ ಪರಿಷತ್   ನಡೆಸುತ್ತಿರುವ ‘ಸಾಹಿತ್ಯದ  ನಡಿಗೆ ಗ್ರಾಮದ ಕಡೆಗೆ’ ಎಂಬ ಘೋಷ ವಾಕ್ಯದಲ್ಲಿ  ಪುತ್ತೂರು ತಾಲೂಕಿನ 32  ಗ್ರಾಮದಲ್ಲಿ  ನಡೆವ  ‘ಗ್ರಾಮ ಸಾಹಿತ್ಯ ಸಂಭ್ರಮ’  ಸರಣಿ ಕಾರ್ಯಕ್ರಮದ ಸಂಚಾಲಕರಾಗಿ ಯುವ ಸಾಹಿತಿ  ಶ್ರೀ ನಾರಾಯಣ ಕುಂಬ್ರ ಅವರು ನೇಮಕಗೊಂಡಿದ್ದಾರೆ.   2022 …

Read more

ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಇದರ ಪದಸ್ವೀಕಾರ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಇದರ ನೂತನ ಅಧ್ಯಕ್ಷರ ಪದಸ್ವೀಕಾರ ಸಮಾರಂಭವು  ದಿನಾಂಕ 12-02-2022 ರ ಶನಿವಾರ ಸಾಯಂಕಾಲ 3:30 ಕ್ಕೆ ಸರಿಯಾಗಿ ಪುತ್ತೂರಿನ ಪರ್ಲಡ್ಕದ ಬಾಲವನದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಡಾ.ಶಿವರಾಮ ಕಾರಂತ ಬಯಲು ರಂಗಮಂದಿರದಲ್ಲಿ ನಡೆಯಿತು.  ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಶರಾಗಿ ಉದ್ಯಮಿ ಮತ್ತು ಖ್ಯಾತ ಸಾಹಿತಿಗಳು ಆದ ಶ್ರೀ ಪುತ್ತೂರು ಉಮೇಶ್ ನಾಯಕ್ ಆಯ್ಕೆಯಾಗಿದ್ದಾರೆ. ಹಾಗೇನೇ ಗೌರವ ಕಾರ್ಯದರ್ಶಿಗಳಾಗಿ ಶಿಕ್ಷಕಿ ಲೇಖಕಿಯೂ …

Read more

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡಭವನ ನಿರ್ಮಾಣ

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಕನ್ನಡಭವನ ನಿರ್ಮಾಣಕ್ಕೆ ಸ್ಥಳ ಮಂಜೂರು ಆಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷನಾದಲ್ಲಿ ಜಿಲ್ಲೆಗೆ ಕನ್ನಡ ಭವನ ನಿರ್ಮಾಣ

ಪುತ್ತೂರು: ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ತಾನು ಸ್ಪರ್ಧಿಸಿದ್ದು, ಜಿಲ್ಲಾಧ್ಯಕ್ಷರಾಗಿ ಚುನಾಯಿತರಾದರೆ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸುವ ಬಗ್ಗೆ ಪ್ರತ್ನಿ ಪಡುತ್ತೇನೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾದ ಎಂ.ಆರ್. ವಾಸುದೇವ ಮಂಗಳೂರು ಅವರು ತಿಳಿಸಿದ್ದಾರೆ. ಅವರು ಪುತ್ತೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಾನು ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕನಾಗಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸಿದ್ದೇನೆ. ಈ ಸಂದರ್ಭದಲ್ಲಿ ತ್ರಿಭಾಷಾ ಸೂತ್ರದಡಿಯಲ್ಲಿ ವಿಮಾನ ನಿಲ್ದಾಣದ ನಾಮಫಲಕವನ್ನು ಕನ್ನಡದಲ್ಲಿ ಮೊದಲ ಬಾರಿಗೆ ಅಳವಡಿಸಿದ್ದೇನೆ. ಅಲ್ಲದೆ …

Read more

ಕಸಾಪ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ

ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷರ ಚುನಾವಣೆ ಭಾನುವಾರ ನಡೆಯಿತು. ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಮತ ಎಣಿಕೆಯ ವಿವರ ಲಭ್ಯವಾಗಿದ್ದು, ಈ ಪ್ರಕಾರ ಡಾ. ಮಹೇಶ್ ಜೋಶಿ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿದೆ.