‘ನನ್ನೂರಿನಲ್ಲಿ ನಾ ಕಂಡ ವಿಶೇಷತೆ’ – ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ವಿನೂತನ ಕಾರ್ಯಕ್ರಮ

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಉಪ್ಪಿನಂಗಡಿ ಹೋಬಳಿ ಘಟಕದ ವತಿಯಿಂದ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರದತ್ತ ಬರಮಾಡಿಕೊಳ್ಳುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ‘ನನ್ನೂರಿನಲ್ಲಿ ನಾ ಕಂಡ ವಿಶೇಷತೆ’ ವಿದ್ಯಾರ್ಥಿಗಳಿಗೆ ಬರವಣಿಗೆ ಪ್ರೋತ್ಸಾಹ ನೀಡುವ ಜೊತೆಗೆ ಊರಿನ ವಿಶೇಷತೆಗಳ ಅನಾವರಣ.. ಯೋಜನೆಯನ್ನು ಹಮ್ಮಿಕೊಂಡ ಉಪ್ಪಿನಂಗಡಿ ಹೋಬಳಿ ಘಟಕದ ಅಧ್ಯಕ್ಷರಾದ ಶ್ರೀ ಕರುಣಾಕರ ಸುವರ್ಣ ಹಾಗೂ ಕಾರ್ಯದರ್ಶಿಗಳಾದ ಉದಯ್ ಕುಮಾರ್ ಹಾಗೂ ಸರ್ವ ಪದಾಧಿಕಾರಿಗಳಿಗೆ ಅಭಿನಂದನೆಗಳು.

ಕಸಾಪಾ ಪುತ್ತೂರು – ಕೊಡಿಪ್ಪಾಡಿ ಗ್ರಾಮ ಸಾಹಿತ್ಯ ಸಂಭ್ರಮ

ಸಾಹಿತ್ಯ ವೇದಿಕೆಯಿಂದ ಗ್ರಾಮೀಣ ಪ್ರತಿಭೆಗಳಿಗೆ ಸಾಹಿತ್ಯ ಕ್ಷೇತ್ರದಲ್ಲಿ  ಬೆಳೆಯಲು ಗ್ರಾಮ ಸಾಹಿತ್ಯ ಸಂಭ್ರಮ ಪರಿಣಾಮಕಾರಿ- ಶ್ರೀ ಸೋಮಪ್ಪ ಪೂಜಾರಿ ಪುತ್ತೂರು,ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ನೇತೃತ್ವದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕೊಡಿಪ್ಪಾಡಿ ಸಹಯೋಗದಲ್ಲಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಮಿತ್ರಂಪಾಡಿ ಜಯರಾಮ ರೈ ಅಬುದಾಬಿಯವರ ಪೋಷಕತ್ವದಲ್ಲಿ ದಿನಾಂಕ 29-6-2024 ಶನಿವಾರ ಕೊಡಿಪ್ಪಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ 14ನೇ ಸರಣಿ ಕಾರ್ಯಕ್ರಮವನ್ನು …

Read more

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ  – 105 ವಿದ್ಯಾರ್ಥಿಗಳಿಗೆ ಕನ್ನಡ ಪ್ರತಿಭೆ ಪ್ರಶಸ್ತಿ ಪ್ರಧಾನ

ಪುತ್ತೂರು ತಾಲೂಕಿನಿಂದ  ಹೆಚ್ಚಿನ ಸಂಖ್ಯೆಯಲ್ಲಿ ಐ.ಎ.ಎಸ್ ಅಧಿಕಾರಿಗಳಾಗಬೇಕು –  ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: 2023-2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ ಶೇ.100 ಅಂಕ ಪಡೆದ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615ಕ್ಕಿಂತ ಹೆಚ್ಚು ಅಂಕ ಪಡೆದ 11 ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ  ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರ ನೀಡಿ  ಜೂ. 15ರಂದು ತೆಂಕಿಲ ನರೇಂದ್ರ …

Read more

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮ

ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮ. ಸ್ಥಳೀಯ ಸಾಧಕರಿಗೆ ಸನ್ಮಾನ ಸಾಧಕರ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸನ ಅಧ್ಯಯನಕಾರರಾದ ಶ್ರೀ ಉಮಾನಾಥ್ ಶೆಣೈ, ಸಾಹಿತಿ ಶಿಕ್ಷಕಿ ಶಾಂತಾ ಪುತ್ತೂರು, ಸಂಗೀತ ಕಲಾವಿದರಾದ ಮಿಥುನ್ ರಾಜ್ ವಿದ್ಯಾಪುರ, ಡಾ.ಶ್ರೀಶಭಟ್ ಸ್ಥಾಪಕಾಧ್ಯಕ್ಷರು ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ (ರಿ), ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಶ್ರೀಮತಿ ಪ್ರೇಮಲತಾ ಎಂ,ಶ್ರೀಮತಿ ಸುಲೋಚನಾ ಕೆ ರವರನ್ನು ಸ್ಥಳೀಯ ಸಾಧಕರ ನೆಲೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು

ಕಬಕ ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಸ್ಥಳೀಯ ಪ್ರತಿಭೆಗಳಿಗೆ ಮತ್ತು ಸಾಧಕರಿಗೆ ಅವಕಾಶ

ಪುತ್ತೂರು : ವರ್ಷದಲ್ಲಿ ಒಂದು ಬಾರಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ತಾಲೂಕಿನಲ್ಲಿರುವ ಎಲ್ಲಾ ಸಾಹಿತಿಗಳಿಗೆ ಮತ್ತು ಕಲಾವಿದರಿಗೆ ವೇದಿಕೆ ನೀಡಲು ಹಾಗೂ ಸಾಧಕರನ್ನು ಸನ್ಮಾನಿಸಲು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಪುತ್ತೂರು ತಾಲೂಕಿನ 32 ಗ್ರಾಮದಲ್ಲೂ ತಿಂಗಳಿಗೆ ಒಂದರಂತೆ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮವನ್ನು ಏರ್ಪಡಿಸಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಹಾಗೂ ಸಾಧಕರನ್ನ ಗುರುತಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದೇವೆ. ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಭಾಧ್ಯಕ್ಷತೆ ವಹಿಸಿದ ಪುತ್ತೂರು ಕಸಾಪ ಅಧ್ಯಕ್ಷರಾದ ಪುತ್ತೂರು …

Read more