ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ

ಇತ್ತೀಚೆಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಡಾ. ಅಮೃತ ಸೋಮೇಶ್ವರ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ‘ನುಡಿನಮನ’ ಕಾರ್ಯಕ್ರಮ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಬಳಿ ಇರುವ ಅನುರಾಗ ವಠಾರದಲ್ಲಿ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ದಿನಾಂಕ 13-01-2024 ರಂದು ನಡೆಯಿತು.

ಅಮೃತ ಸೋಮೇಶ್ವರ ಅವರು ಬಹುಭಾಷಾ ಪಂಡಿತರು, ಅವರು ಕನ್ನಡ, ಮಲಯಾಳಂ, ತುಳು ಭಾಷೆಯಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ, ಯಕ್ಷಗಾನ, ನಾಟಕ ರಂಗಗಳಲ್ಲಿ ಇವರ ಕೊಡುಗೆ ಅಪಾರವಾದದ್ದು. ಎಳ್ಳಷ್ಟು ಕೋಪವಿಲ್ಲದ, ಸಾಧು ಸ್ವಭಾವವನ್ನು ಅಳವಡಿಸಿಕೊಂಡ ಮಹಾನ್ ಚೇತನ ಅಮೃತ ಸೋಮೇಶ್ವರ ಅವರು, ಎಂದು ಹಿರಿಯ ಸಾಹಿತಿಗಳಾದ ಪ್ರೊ. ವಿ.ಬಿ. ಅರ್ತಿಕಜೆ ಅವರು ಅಮೃತ ಸೋಮೇಶ್ವರ ಅವರ ಜೊತೆಗಿನ ಒಡನಾಟವನ್ನು ಸ್ಮರಿಸುತ್ತಾ ಶ್ರದ್ಧಾಂಜಲಿ ಅರ್ಪಿಸಿದರು.

Nudinamana for amrutha someshwara

ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಡಾ.ಹೆಚ್.ಜಿ. ಶ್ರೀಧರ್, ನಾರಾಯಣ ರೈ ಕುಕ್ಕುವಳ್ಳಿ, ಡಾ. ಪೀಟರ್ ವಿಲ್ಸನ್ ಪ್ರಭಾಕರ್, ಜಯಾನಂದ ಪೆರಾಜೆ, ನಲ್ಕ ಗೋಪಾಲಕೃಷ್ಣ ಆಚಾರ್, ಭಾಸ್ಕರ್ ಬಾರ್ಯ, ಹರಿನಾರಾಯಣ ಮಾಡಾವು, ಅಬೂಬಕ್ಕರ್ ಆರ್ಲಪದವು, ಪು ತಾ ಕ ಸಾ ಪರಿಷತ್ ಇದರ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಮುಂತಾದವರು ಅಮೃತ ಸೋಮೇಶ್ವರ ಅವರ ಜೊತೆಗಿನ ಒಡನಾಟದ ಅಮೃತಗಳಿಗೆಯನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿದರು. ಶ್ರೀ ಸುಬ್ರಹ್ಮಣ್ಯ ಶರ್ಮಾ ಅವರು ಜಿ.ಎಸ್.ಶಿವರುದ್ರಪ್ಪ ಅವರು ರಚಿಸಿದ ಹಾಡನ್ನು ಹಾಡಿ ಶ್ರದ್ಧಾಂಜಲಿ ಅರ್ಪಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಪುರಸ್ಕೃತ ಶ್ರೀ ಲಕ್ಷ್ಮೀಶ ತೋಳ್ಪಾಡಿ, ಕರ್ನಾಟಕ ಸಂಘದ ಅಧ್ಯಕ್ಷರಾದ ಬಿ.ಪುರಂದರ ಭಟ್, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕೋಶ್ಯಾಧ್ಯಕ್ಷರಾದ ಬಿ. ಐತಪ್ಪ ನಾಯ್ಕ್ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಪದಾಧಿಕಾರಿಗಳು ಹಾಗೂ ಅಮೃತ ಸೋಮೇಶ್ವರ ಅವರ ಅಭಿಮಾನಿಗಳು ಉಪಸ್ಥಿತರಿದ್ದು ದಿವಂಗತ ಅಮೃತ ಸೋಮೇಶ್ವರವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

Leave a comment