2023 – 2024 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯದಲ್ಲಿ 100% ಅಂಕ ಪಡೆದ 19 ವಿದ್ಯಾರ್ಥಿಗಳು ಹಾಗೂ 86 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 105 ವಿದ್ಯಾರ್ಥಿಗಳಿಗೆ ಹಾಗೂ 10ನೇ ತರಗತಿಯಲ್ಲಿ 615 ರ ಮೇಲ್ಪಟ್ಟು ಅಂಕ ಪಡೆದ 10 ವಿದ್ಯಾರ್ಥಿಗಳಿಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ‘ ಪುರಸ್ಕಾರ ಸಮಾರಂಭವು 15-06-2024 ರ ಶನಿವಾರ ಮಧ್ಯಾಹ್ನ 2:30 ಗಂಟೆಗೆ ಸರಿಯಾಗಿ ಪುತ್ತೂರಿನ ತೆಂಕಿಲದಲ್ಲಿ ಇರುವ ಪ್ರತಿಷ್ಠಿತ ನರೇಂದ್ರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಕನ್ನಡದಲ್ಲೂ ಐಎಎಸ್ ಹಾಗೂ ಐಪಿಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದೆಂಬ ವಿಚಾರದ ಕಾರ್ಯಗಾರವನ್ನು ಡಾ. ಮೈತ್ರಿ ಭಟ್ ಅವರು ನಡೆಸಿಕೊಡಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಅಶೋಕ ರೈ ಅವರು ನೆರವೇರಿಸಲಿದ್ದಾರೆ, ಸಹಾಯಕ ಆಯುಕ್ತರಾದ ಶ್ರೀಜುಬಿನ್ ಮೊಹಾಪಾತ್ರ ಅವರು ವಿದ್ಯಾರ್ಥಿಗಳಿಗೆ ಅಭಿನಂದಿಸಲಿದ್ದಾರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್ ಎಸ್.ಆರ್ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ನರೇಂದ್ರ ಪಿಯು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀಕಾಂತ್ ಕೊಳತ್ತಾಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರು ಸಭಾಧ್ಯಕ್ಷತೆಯನ್ನು ವಹಿಸಲಿದ್ದಾರೆ.
ವಿ ಸೂ: ಮರು ಮೌಲ್ಯಮಾಪನದಲ್ಲಿ ಕನ್ನಡ ವಿಷಯದಲ್ಲಿ ನೂರು ಶೇಕಡ ಅಂಕ ಪಡೆದ ವಿದ್ಯಾರ್ಥಿಗಳು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅವರ ದೂರವಾಣಿ ಸಂಖ್ಯೆ +919844401295 ಯನ್ನು ಸಂಪರ್ಕಿಸಬಹುದಾಗಿದೆ.