ನರಿಮೊಗರು ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ -16

ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ನರಿಮೊಗರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಸಹಕಾರದೊಂದಿಗೆ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಸಂಯೋಜನೆಯಲ್ಲಿ, ಹೊರನಾಡ ಕನ್ನಡಿಗ ಶ್ರೀ ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಪೋಷಕತ್ವದಲ್ಲಿ,
ಯುವ ಜನತೆಯನ್ನು ಸಾಹಿತ್ಯ ಲೋಕದತ್ತ ಬರಮಾಡಿಕೊಳ್ಳುವ ಹಾಗೂ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನರಿಮೊಗರು ಗ್ರಾಮದಲ್ಲಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಎಂಬ ಘೋಷ ವಾಕ್ಯದಲ್ಲಿ ನಡೆಸುವ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ-16 ಈ ಕಾರ್ಯಕ್ರಮವು
ಶತ ಸಂಭ್ರಮ ಆಡಿಟೋರಿಯಂ ನರಿಮೊಗರು ಶಾಲೆಯಲ್ಲಿ 24-08-2024ರ ಶನಿವಾರ ಬೆಳಿಗ್ಗೆ 9.30 ಯಿಂದ ಸಂಜೆ 3 ವರೆಗೆ ನಡೆಯಲಿದೆ.


ಈ ಕಾರ್ಯಕ್ರಮದ ಸರ್ವಾಧ್ಯಕ್ಷತೆಯನ್ನು ಸ. ಉ. ಹಿ. ಪ್ರಾ ಶಾಲೆ ನರಿಮೊಗರು ಇಲ್ಲಿನ ವಿದ್ಯಾರ್ಥಿನಿ ಕು.ಪೂಜಾಶ್ರೀರವರು ವಹಿಸಲಿದ್ದಾರೆ.ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಭಾಷಣವನ್ನು ಸ. ಹಿ. ಪ್ರಾ. ಶಾಲೆ ಶಾಂತಿಗೋಡು ಇಲ್ಲಿನ ವಿದ್ಯಾರ್ಥಿ ಧವನ್ ಕುಮಾರ್ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾದ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದು, ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರಿಣಿ ಪಂಜಳ ಸಮಾರಂಭ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ನರಿಮೊಗರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ರವಿಚಂದ್ರ. ಯು ,20ನೇ ಪುತ್ತೂರು ಕನ್ನಡ ಸಾಹಿತ್ಯ ಸಮ್ಮೇಳನದ ಆಶ್ರಯದಾತರು, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಸಂಚಾಲಕರಾದ ಶ್ರೀ ಭಾಸ್ಕರ ಹಿಂದಾರು,ನರಿಮೊಗರು ಸಿ. ಆರ್. ಪಿ. ಪರಮೇಶ್ವರಿ ಪ್ರಸಾದ್,ನರಿಮೊಗರು ಶಾಲೆ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕೃಷ್ಣರಾಜ ಜೈನ್. ಡಿ ಉಪಸ್ಥಿತರಿರುವರು.

10 ಸಾಧಕರಿಗೆ ಸನ್ಮಾನ

ನರಿಮೊಗರು ಮತ್ತು ಶಾಂತಿಗೋಡು ಗ್ರಾಮದ ವಿವಿಧ ಕ್ಷೇತ್ರದ ಸಾಧಕರಾದ ಶ್ರೀಮತಿ ಯಮುನಾ ಪೂಜಾರಿ, ಶ್ರೀ ಅವಿನಾಶ್ ಕೊಡಂಕಿರಿ, ಶ್ರೀ. ಪರೀಕ್ಷಿತ್ ತೋಳ್ಪಾಡಿ, ಶ್ರೀ.ಸುಧಾಕರ್ ಕುಲಾಲ್ ,ಶ್ರೀಮತಿ ಸವಿತಾ ಕುಮಾರಿ ಎಂ. ಡಿ , ಶ್ರೀ.ವಿದ್ವಾನ್ ಗೋಪಾಲಕೃಷ್ಣ , ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ , ಶ್ರೀ. ಜಯರಾಮ ಕೆದಿಲಾಯ ಶಿಬರ,ಶ್ರೀ. ಜಯಗುರು ಹಿಂದಾರು, ಶ್ರೀ. ತಾರಾನಾಥ್. ಪಿ. ಸವಣೂರು ಇವರನ್ನು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿಗಳಾದ ಶ್ರೀ ಲಕ್ಷ್ಮೀಶ್ ತೋಳ್ಪಾಡಿಯವರು ಅಭಿನಂದಿಸಲಿದ್ದಾರೆ.

ವಿವಿಧ ಗೋಷ್ಠಿಗಳು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯುವ ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ವಿನೂತನ ಪ್ರಯೋಗಗಳನ್ನು ಹಮ್ಮಿಕೊಂಡಿದ್ದು ಯಶಸ್ವಿಯಾಗಿರುತ್ತದೆ. ಗೋಷ್ಠಿ -1 ಕನ್ನಡದಲ್ಲೂ ಐಎಎಸ್ ಬರೆಯಿರಿ ಅಭಿಯಾನದ ಅಂಗವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಗಾರ, ಗೋಷ್ಠಿ -2 ಬಾಲ ಕವಿಗೋಷ್ಠಿ, ಗೋಷ್ಠಿ- 3 ಬಾಲ ಕಥಾಗೋಷ್ಠಿ, ಗೋಷ್ಠಿ-4 ಸಾಹಿತ್ಯ ಆಸಕ್ತಿ ಇಲ್ಲದ ವಿದ್ಯಾರ್ಥಿಗಳನ್ನು ಸಾಹಿತ್ಯ ಕ್ಷೇತ್ರಕ್ಕೆ ಸೆಳೆಯುವ ನಿಟ್ಟಿನಲ್ಲಿ ‘ಪ್ರವಾಸ ಕಥನ’ ವಾಚನ ಹಿಂದಿನ ಸಾಹಿತ್ಯ ಸಂಭ್ರಮದಲ್ಲಿ ಅಳವಡಿಸಲಾಗಿದ್ದು ಯಶಸ್ವಿಯಾಗಿದ್ದು ಜನ ಮೆಚ್ಚುಗೆಗೆ ಪಾತ್ರವಾಗಿದೆ, ಗೋಷ್ಠಿ -5 ರಲ್ಲಿ “ಮಕ್ಕಳನ್ನ ಸಾಹಿತ್ಯ ಮತ್ತು ಬರವಣಿಗೆ ಕ್ಷೇತ್ರಕ್ಕೆ ಸೆಳೆಯುವ ನಿಟ್ಟಿನಲ್ಲಿ ಪ್ರಥಮ ಬಾರಿಗೆ ‘ನನ್ನ ಆಪ್ತಮಿತ್ರ’ ಲೇಖನ ವಾಚನ ಗೋಷ್ಠಿಯನ್ನು ಅಳವಡಿಸಿಕೊಳ್ಳಲಾಗಿದೆ.

ಸಭಾ ಕಾರ್ಯಕ್ರಮದ ಬಳಿಕ ಕನ್ನಡದಲ್ಲೂ ಐ ಎ ಎಸ್ ಬರೆಯಿರಿ ಕುರಿತು ಶ್ರೀ ಪ್ರಣವ್ ಭಟ್ ಉಪನ್ಯಾಸ ನೀಡಲಿದ್ದಾರೆ. ನರಿಮೊಗರು ಗ್ರಾಮಕ್ಕೆ ಸಂಬಂಧ ಪಟ್ಟ ಸ. ಉ. ಹಿ. ಪ್ರಾ. ಶಾಲೆ ನರಿಮೊಗರು , ಸ. ಉ. ಹಿ. ಪ್ರಾ. ಶಾಲೆ ಮುಕ್ವೆ , ಸ. ಹಿ. ಪ್ರಾ.ಶಾಲೆ ಶಾಂತಿಗೋಡು , ಸ. ಹಿ. ಪ್ರಾ. ಶಾಲೆ ಆನಡ್ಕ , ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆ ನರಿಮೊಗರು, ಸರಸ್ವತಿ ವಿದ್ಯಾಮಂದಿರ ಪುರುಷರಕಟ್ಟೆ,ಶಾಂತಿಗಿರಿ ವಿದ್ಯಾನಿಕೇತನ ಶಾಲೆ ಪಂಜಳ, ಪಿಎಂಶ್ರೀ ಸ. ಹಿ. ಪ್ರಾ. ಶಾಲೆ ವೀರಮಂಗಲ ಇಲ್ಲಿನ ವಿದ್ಯಾರ್ಥಿಗಳು ವಿವಿಧ ಗೋಷ್ಠಿಗಳಲ್ಲಿ ಭಾಗಿಯಾಗಲಿದ್ದಾರೆ. ಭೋಜನ ವಿರಾಮದಲ್ಲಿ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ಬೆಳಗ್ಗೆ 9:30 ಕ್ಕೆ ಸರಿಯಾಗಿ ವಿದ್ಯಾರ್ಥಿ ಸರ್ವಾಧ್ಯಕ್ಷರನ್ನು ಗಣ್ಯರಿಂದ ಪೇಟ ತೊಡಿಸಿ ಸಭಾಂಗಣಕ್ಕೆ ಮೆರವಣಿಗೆಯ ಮೂಲಕ ಕರೆತರಲಿದ್ದು ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಸಂಜೆ 3:30ರ ತನಕ ಈ ಸಾಹಿತ್ಯ ಸಂಭ್ರಮ ಕಾರ್ಯಕ್ರಮವು ಮಕ್ಕಳ ಸಾಹಿತ್ಯ ಸಮ್ಮೇಳನದ ಸ್ವರೂಪದಲ್ಲಿ ನಡೆಯಲಿದೆ ಎಂದು ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ನಾರಾಯಣ ಕುಂಬ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment